ಭದ್ರಾವತಿ-ಭದ್ರಾನದಿಗೆ ತ್ಯಾಜ್ಯ ಎಸೆಯುವವರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಹೃದಯ ಭಾಗ ದಲ್ಲಿ ಹರಿಯುತ್ತಿರುವ ಭದ್ರಾನದಿಗೆ ಸೇತುವೆಗಳ ಮೇಲಿಂದ ಕಸ ಎಸೆಯುತ್ತಿದ್ದು ಅವರುಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭದ್ರಾನದಿ ಸಂರಕ್ಷಣಾ ಪಡೆ ವತಿ ಯಿಂದ ನಗರಸಭೆ ಪೌರಾಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಪವಿತ್ರ ನದಿಗೆ ಕೆಲ ಅನಾಗರಿಕ ಸಾರ್ವಜನಿಕರು ಎರಡು ಸೇತುವೆಗಳ ಮೇಲಿಂದ ಕಸ,ಪ್ಲಾಸ್ಟಿಕ್ ಬ್ಯಾಗ್ ಎಸೆದು ಮಲೀನ ಮಾಡುತ್ತಿದ್ದು, ಇದರಿಂದ ನದಿ ಹಾಗೂ ಜಲಚರಗಳಿಗೆ ಕುತ್ತು ತರುತ್ತಿದೆ. 

1974 ಜಾಲಮಾಲಿನ್ಯ ಕಾಯ್ದೆ ತಡೆಗಟ್ಟುವ ಸೆಕ್ಷನ್ 24 ರ ಅನ್ವಯ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ 41 ಮತ್ತು 45 ರ ಸೆಕ್ಷನ್ ಅನ್ವಯ ದಂಡನೆಯನ್ನು ವಿಧಿಸಬಹು ದಾಗಿದೆ. ಘನ ತ್ಯಾಜ್ಯ ನಿರ್ವಹಣೆ 2016 ರ ಕಾಯ್ದೆ ಅನ್ವಯ ಯಾವುದೇ ನದಿ ಪಾತ್ರ ಗಳಲ್ಲಿ ಕಸ ಎಸೆಯುವುದು, ಘನತ್ಯಾಜ್ಯ ನಿರ್ಬಂಧವಿದ್ದರೂ ಆದೇಶ ಗಾಳಿಗೆ ತೂರಿದಂತಾಗಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಲವು ನಗರಸಭೆಗಳ ಮೇಲೆ ಪರಿಸರ ಪರಿಹಾರ ವಿಧಿಸಿದ್ದು ಓಡಿಶಾ ರಾಜ್ಯದ ಕೇಂದ್ರಪುರ ಮುನಿಸಿಪಾಲಿಟಿ, ಚಂಬಲ್ ನದಿ ಪ್ರಕರಣ, ಗೊರಕ್ ಪುರ ಕೊಳಚೆ ನೀರು ಪ್ರಕರಣಗಳನ್ನು ಗಮನಿಸಿ ಕೂಡಲೇ ಭದ್ರಾ ನದಿಯ ಮಾಲಿನ್ಯ ತಡೆಗೆ ಮುಂದಾಗುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭದ್ರಾ ನದಿ ಸಂರಕ್ಷಣಾ ಪಡೆಯ ಸಿ.ತೀರ್ಥೇಶ್, ಡಿಎಸ್ಎಸ್ ಮುಖಂಡ ದಾಸರಕಲ್ಲಳ್ಳಿ ನಾಗರಾಜ್, ಹರೀಶ್, ಹಿರಿಯ ಹೋರಾಟಗಾರ ಜಯಣ್ಣ, ಗಣೇಶ್, ರೈತ ಮುಖಂಡ ಇಮ್ರಾನ್ ಪಾಷಾ, ಭದ್ರಾನದಿ ಸಂರಕ್ಷಣಪಡೆಯ ಮುಖ್ಯಸ್ಥ ರಾದ ಕಾರ್ತಿಕ್ ಕಿದ್ಮಯ್ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು