ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈಪಾಸ್ ರಸ್ತೆ ಬಿಳಿಕಿ ತಿರುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ನಡೆದಿದ್ದು, ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸುವಂತೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಅವರಿಗೆ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷ ಎ.ಜಿ ಕಾರಿಯಪ್ಪ ಸೂಚಿಸಿದ್ದಾರೆ.
ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡಿಪಡಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎ.ಜಿ ಕಾರಿಯಪ್ಪ ರವರು ಘಟನೆ ಸಂಬಂಧ ದಾಖಲಾಗಿರುವ ದೂರನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ರನ್ನು ತಕ್ಷಣ ಪತ್ತೆ ಮಾಡುವ ಕುರಿತಂತೆ ನ್ಯೂಟೌನ್ ಪೊಲೀಸ್ ಠಾಣಾ ಉಪ ನಿರೀಕ್ಷಕರಿಗೆ ಮಾರ್ಗದರ್ಶನ ನೀಡಿದರು.
ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಗಳು ಮರುಕಳುಹಿಸದಂತೆ ಎಚ್ಚರವಹಿಸು ವಂತೆ ಹಾಗು ನಗರದ ಅತಿಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
Tags
ಭದ್ರಾವತಿ ವರದಿ