ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಹಳ್ಳಕ್ಕೆ ಉರುಳಿದೆ. ಶ್ರೀ ಗುರುರೇಣುಕಾಂಬ ಖಾಸಗಿ ಬಸ್ ದಾವಣಗೆರೆಯಿಂದ ಭದ್ರಾವತಿ ಕಡೆಗೆ ಬರುವಾಗ ಈ ಘಟನೆ ಸಂಭವಿಸಿದ್ದು, ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಬಸ್ ನಲ್ಲಿ ಇದ್ದ ಮೂವತ್ತು ಜನ ಕ್ಕಿಂತಲೂ ಹೆಚ್ಚಿನ ಜನರಿಗೆ ಗಾಯ ಗಳಾಗಿವೆ. ಹಲವರಿಗೆ ಗoಭೀರಗಾಯ ಗಳಾಗಿದ್ದು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಪ್ರಸಾದ್ ನ ನಿರ್ಲಕ್ಷದಿಂದ ಬಸ್ ಹಳ್ಳಕ್ಕೆ ಉರುಳಿದೆ ಎಂಬ ಪ್ರಾಥಮಿಕಮಾಹಿತಿ ಲಭ್ಯವಾಗಿದೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪ್ರಯಾಣಿಕರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಗೆ ಸಾಗಿಸಲಾಗಿದೆ. ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಸಂಭವಿಸಿದೆ.