ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಏ: 14 ರಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ:ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಹಮ್ಮಿ ಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಏ:14 ರ ಜಯಂತೋತ್ಸವ ಕಾರ್ಯಕ್ರಮ ದಂದು ವಿವಿಧ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಯವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಸಾಧಕರಿಗೆ ಡಾ:ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ಶ್ರೀಮತಿ ರಮಾಬಾಯಿ ಅಂಬೇಡ್ಕರ್ (ಮಹಿಳೆಯರಿಗೆ ಮಾತ್ರ) ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಏ: 8 ರೊಳಗೆ ಅರ್ಜಿಗಳನ್ನು ಕಚೇರಿಗೆ ತಲುಪಿಸಲು ಕೋರಲಾಗಿದೆ.