ವಿಜಯ ಸಂಘರ್ಷ ನ್ಯೂಸ್
- ಸಮಾಜ ಸೇವಕರಿಗೆ ಒಲಿದ ಗೌರವ-
ಭದ್ರಾವತಿ: ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ನಗರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿ ಸಿದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರವರ 135ನೇ ಜನ್ಮದಿನಾ ಚರಣೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಭವನ ಉದ್ಘಾಟನೆ ಸಮಾರಂಭ ಕಾರ್ಯಕ್ರಮದಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ದಲಿತ ಮುಖಂಡರ ಸುಧೀರ್ಘ ಸಾಮಾಜಿಕ ಕ್ಷೇತ್ರದ ಸೇವೆಯನ್ನು ಗುರುತಿಸಿ ಸನ್ಮಾನಿಸ ಲಾಯಿತು.
ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ದಲಿತ ಮುಖಂಡ ವಿ.ವಿನೋದ್, ದಲಿತ ಮುಖಂಡರಾದ ಹೊಳೆ ಹೊನ್ನೂರು ರಘು,ಕದರಪ್ಪ,ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ಗೋವಿಂದ ರಾಜ್, ಹಿರಿಯ ಪತ್ರಕರ್ತ ಆರ್.ವಿ.ಕೃಷ್ಣ ಸೇರಿದಂತೆ ಇನ್ನಿತರರು ಹಲವಾರು ವರ್ಷಗಳಿಂದ ದಲಿತಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದು, ಇವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಯನ್ನು ನೀಡಲಾಗಿದೆ.
ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಭಾನು, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ. ಪಲ್ಲವಿ, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮ ಬದರಿನಾರಾಯಣ, ಬಿ.ಕೆ ಮೋಹನ್, ತಹಸೀಲ್ದಾರ್ ಪರುಸಪ್ಪ ಕುರುಬರ, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ಪೌರಾಯುಕ್ತ ಕೆ.ಎನ್.ಹೇಮಂತ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿ ಕಾರಿ ಎಂ.ಆಶಾಲತ, ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಎಸ್ ಗಣೇಶ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಸೇರಿದಂತೆ ದಲಿತ ಸಂಘಟನೆಗಳ ಮುಖಂಡರು, ಮಹಿಳಾ ಸಂಘಟನೆಗಳ ಪ್ರಮುಖರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.