ಭದ್ರಾವತಿ-ವಿಇಎಸ್ ವಿದ್ಯಾ ಸಂಸ್ಥೆಯಲ್ಲಿ ಗ್ರಾಜುಯೇಷನ್ ಡೇ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಹೊಸಸೇತುವೆ ರಸ್ತೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ನಗರದ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಡೇ ನಡೆಸಲಾಯಿತು. 

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾಥಿಗಳು ಎಲ್ಲರ ಗಮನ ಸೆಳೆದರು. ಇದೊಂದು ವಿಶಿಷ್ಟ ಕಾರ್ಯಕ್ರಮ ವಾಗಿದ್ದು, ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ನಿಟ್ಟಿನಲ್ಲಿ ಸಹಕಾರಿ ಯಾಗಿದೆ ಎಂಬ ಭಾವನೆ ವ್ಯಕ್ತವಾಯಿತು. 

ವಿದ್ಯಾ ಸಂಸ್ಥೆ ಆಡಳಿತ ಅಧಿಕಾರಿ 
ಡಾ.ಎಸ್. ಪಿ.ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಮುಖ್ಯೋಪಾಧ್ಯಾಯಿನಿ ಕೆ.ಚೈತ್ರ, ಎಂ. ಹೇಮಾವತಿ, ಕಿರಣ್, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು