ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ : ತಮ್ಮ ಕರ್ತವ್ಯದ ಸಂದರ್ಭದಲ್ಲಿ ಸ್ವಂತ ಕೆಜೆಡಿ ಹಣ ಹಾಗು ದಾನಿಗಳ ನೆರವಿ ನೊಂದಿಗೆ ವಿದ್ಯಾರ್ಥಿ ನಿಲಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿದ್ದ ದೇವರಾಜ ಅರಸು ವಿದ್ಯಾರ್ಥಿ ನಿಲಯದ ನಿವೃತ್ತ ಮೇಲ್ವಿಚಾರಕ ಸಿ.ಎಂ ರಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ನಗರಸಭೆ ವ್ಯಾಪ್ತಿಯ ಜಟ್‌ಪಟ್ ನಗರದ ಹಿಂದುಳಿದ ವರ್ಗಗಳ ಇಲಾಖೆ ದೇವರಾಜ ಅರಸು ವಸತಿ ನಿಲಯದ ಮೇಲ್ವಿಚಾರಕ ರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್ ರವರು ಇತ್ತೀಚೆಗೆ ನಿವೃತ್ತಿ ಹೊಂದಿದ್ದು, ಇವರ ಕರ್ತವ್ಯದಲ್ಲಿನ ಬದ್ದತೆ ಹಾಗು ಸ್ವಂತ ಹಣ ಹಾಗು ದಾನಿಗಳ ನೆರವಿನಿಂದ ಕೈಗೊಂಡಿ ರುವ ಕಾರ್ಯಗಳು ಇತರರಿಗೆ ಮಾದರಿ ಯಾಗಿವೆ ಎಂದು ಪ್ರಶಂಸೆ ವ್ಯಕ್ತಪಡಿಸುವ ಮೂಲಕ ನಗರದ ನ್ಯೂಟೌನ್ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಏರ್ಪಡಿಸ ಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಶಿರಸಿ ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ.ಚನ್ನಪ್ಪನವರ್, ಗ್ರೇಡ್-2 ತಹಸೀಲ್ದಾರ್ ಮಂಜಾನಾಯ್ಕ, ಪಶುಪಾಲನಾ ಇಲಾಖೆ ನಿವೃತ್ತ ಹಿರಿಯ ಪರಿವೀಕ್ಷಕ ಎನ್.ಎಸ್ ರಮೇಶ್ ಇತರರು ಉಪಸ್ಥಿತರಿದ್ದರು.