ಭದ್ರಾವತಿ-ಪ್ರಿಯಕರನಿಗಾಗಿ ಗಂಡನನ್ನೇ ವಿಷ ಹಾಕಿ ಕೊಲೆ: ಆರೋಪಿತರಿಗೆ ಗಲ್ಲು ಶಿಕ್ಷೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಪ್ರಿಯಕರನಿಗಾಗಿ ಗಂಡ ನನ್ನೇ ವಿಷ ಹಾಕಿ ಕೊಲೆ ಮಾಡಿದ ಪ್ರಕರಣದಲ್ಲಿ ಇಬ್ವರು ಆರೋಪಿಗಳಿಗೆ ಘನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿ ಆದೇಶಿಸಿದೆ. 

ದಿನಾಂಕಃ 15-01-2020 ರಂದು ಪೇಪರ್ ಟೌನ್ ಪೊಲಿಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ವಾಸಿ ಯಾದ ಫ್ಲೋರಾ ನ್ಯಾನ್ಸಿ ಎಂಬ ಮಹಿಳೆಯು ರಾಜಶೇಖರಯ್ಯ ಎಂಬುವವನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡು, ಆಕೆಯ ಗಂಡನಾದ ಪ್ರಕಾಶ್ ಬಾಬು ಇವರಿ ಬ್ಬರ ಸಂಬಂಧಕ್ಕೆ ಅಡ್ಡಿ ಬರುತ್ತಾನೆ ಎಂದು ಆರೋಪಿತರಿಬ್ಬರು ಸೇರಿ ಪ್ರಕಾಶ್ ಬಾಬುವಿಗೆ ಮತ್ತು ಬರುವ ಔಷದಿಯನ್ನು ಹಾಕಿ ನಂತರ ಉಸಿರು ಗಟ್ಟಿಸಿ ಕೊಲೆ ಮಾಡಿದ್ದು, ಈ ಬಗ್ಗೆ ಗುನ್ನೆ ಸಂಖ್ಯೆ 50/2020 ಕಲಂ 302, 201 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ. 

ಪ್ರಕರಣದ ಆಗಿನ ತನಿಖಾಧಿಕಾರಿ ಗಳಾದ ಮಂಜುನಾಥ್ ಈ.ಓ. ಪೊಲೀಸ್‌ ನಿರೀಕ್ಷಕರು ಪ್ರಕರಣದ ತನಿಖೆ ಪೂರೈಸಿ ,ಘನ ನ್ಯಾಯಾಲ ಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

ಸರ್ಕಾರಿ ಅಭಿಯೋಜಕರಾದ ರತ್ನಮ್ಮ ಪಿ. ವಾದ ಮಂಡಿಸಿದ್ದು ಘನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ನಡೆಸಿದ್ದು, ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ರವರು ಆರೋಪಿತರಿಗೆ ಗಲ್ಲು ಶಿಕ್ಷೆ ಹಾಗೂ 14,00,000/- ದಂಡ ವಿಧಿಸಿದ್ದು, ಪಿರ್ಯಾದಿಗೆ ಪರಿಹಾರವಾಗಿ 5,00,000/- ರೂ ನೀಡಲು ಆದೇಶಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು