ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಸರ್ಕಾರಿ ವಿದ್ಯಾರ್ಥಿನಿಲಯ ಗಳಿಗೆ 2026-27ನೇ ಶೈಕ್ಷಣಿಕ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಡ್ಡಾಯ ವಾಗಿ ಕರ್ನಾಟಕದ ನಿವಾಸಿ ಯಾಗಿರಬೇಕು ಹಾಗೂ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ರೂ. 2.50 ಲಕ್ಷ ಮೀರಿರಬಾರದು. ನಿಯಮಾನುಸಾರ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾ ಯದ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸೀಟುಗಳನ್ನು ಕಾಯ್ದಿರಿಸಲಾಗುತ್ತದೆ. ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಐಡಿ (SSP Student ID CxAaA SATS ID), ಆಧಾರ್ ಕಾರ್ಡ್ ಸಂಖ್ಯೆ (ಹೆಸರು ಆಧಾರ್‌ನಲ್ಲಿರು ವಂತೆ ಇರಬೇಕು), 15 ಅಂಕಿಗಳ ಆರ್ ಡಿ ಸಂಖ್ಯೆ ಹೊಂದಿ ರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪ್ರಸ್ತುತ ವರ್ಷದ ಕಾಲೇಜು ಪ್ರವೇಶ ದಾಖಲಾತಿ ಸಂಖ್ಯೆ ಅಥವಾ ವಿಶ್ವವಿದ್ಯಾಲಯದ ನೋಂದಣಿ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿ ಹಾಗೂ ಒಟಿಪಿ ಪರಿಶೀಲನೆಗಾಗಿ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಅಗತ್ಯವಾಗಿರುತ್ತದೆ.

ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ https://swd.karnataka.gov.in/https://swdhmis.karnataka.gov.in/৩০ ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಯಾವುದೇ ಭೌತಿಕ (ಆಫ್‌ಲೈನ್) ಅರ್ಜಿಗಳನ್ನು ಸ್ವೀಕರಿಸಲಾ ಗುವುದಿಲ್ಲ. ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಜೂ: 30 ಕೊನೆಯ ದಿನಾಂಕವಾಗಿದ್ದು, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಜು: 31 ಕೊನೆಯ ದಿನಾಂಕವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು