ಗೃಹಿಣಿ ಮೇಲೆ ಅತ್ಯಾಚಾರ ಪ್ರಕರಣ: ಬಿಜೆಪಿ‌ ಮುಖಂಡ ಭರತ್ ಬಂಧನ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದ ಆರೋಪದಲ್ಲಿ ವಕೀಲ ಭರತ್ ನನ್ನ‌ ಪೇಪರ್ ಟೌನ್ ಪೊಲೀಸರು ಬಂಧಿಸಿದ್ದಾರೆ. 

    ತಾಲೂಕಿನ ಬಾರಂದೂರಿನಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ವಕೀಲ ಭರತ್ ನನ್ನ ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿನ ಮನೆಯೊಂದರಲ್ಲಿ ಬಿಜೆಪಿ ಮುಖಂಡ ಭರತ್ ನನ್ನ ಬಂಧಿಸಲಾಗಿದೆ. ಬೆಂಗಳೂರಿನಿಂದ ಆರೋಪಿಯನ್ನ ತಡರಾತ್ರಿ ಕರೆತರಲಾಗಿದೆ.

    ಪಿಎಸ್ ಐ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ನಾಗರಾಜ್, ಬಸವರಾಜ್ ರಿಂದ ಕಾರ್ಯಚರಣೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಆರೋಪದಡಿ ಭರತ್ ನ ಬಂಧನವಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು