ವಿಇಎಸ್ ಶಾಲೆಯಲ್ಲಿ ಮೊದಲದಿನವೆ ಮಕ್ಕಳಿಗೆ ಅಕ್ಷರಭ್ಯಾಸ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಹೊಸಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆ ಯಲ್ಲಿ ಮೊದಲದಿನ ಮಕ್ಕಳಿಗೆ ಅಕ್ಷರ ಭ್ಯಾಸ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು.

ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಡಾ. ಎಸ್. ಪಿ ರಾಕೇಶ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿ ವಿಶೇಷವಾಗಿ ಮಕ್ಕಳಿಗೆ ಅಕ್ಷರ ಭ್ಯಾಸ ಮಾಡಿಸುವುದರ ಮೂಲಕ ಶಾಲೆಗೆ ಬರಮಾಡಿಕೊಂಡಿದ್ದು ಎಲ್ಲಾ ಪುಟಾಣಿ ಮಕ್ಕಳು ಒಳ್ಳೆಯ ವಿದ್ಯಾಭ್ಯಾಸವನ್ನು ಕಲಿಯುವುದರ ಮೂಲಕ ನಮ್ಮ ವಿದ್ಯಾಸಂಸ್ಥೆಗೆ ಹಾಗೂ ಪೋಷಕರಿಗೆ ಒಳ್ಳೆಯ ಹೆಸರು ಮತ್ತು ಕೀರ್ತಿಯನ್ನು ತಂದು ಕೊಡಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಪುಟಾಣಿ ಮಕ್ಕಳಿಗೆ ಬ್ಯಾಡ್ಜ್ ನೀಡಿ, ಸ್ವಾಗತಿಸುವುದರ ಮೂಲಕ ಪ್ರಸಕ್ತ ಶೈಕ್ಷಣಿಕ ವರ್ಷವನ್ನು ಆರಂಭಿಸಲಾಯಿತು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಆಂಗ್ಲ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಶಾಹಿನಾ ಬಾನು, ವಿದ್ಯಾ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಶಿಕ್ಷಕ ವೃಂದದವರು ಹಾಗೂ ಪೋಷಕರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಅನಿತಾ ಕುಮಾರಿ. C.N ಸ್ವಾಗತಿಸಿ, ಕವಿತಾ M ಪ್ರಾರ್ಥಿಸಿದರೆ, ಶಿಕ್ಷಕರಾದ ರವಿ.ಆರ್ ರುದ್ರಯ್ಯರವರು ಪೂಜಾ ಕಾರ್ಯಕ್ರಮ ನೆರವೇರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು