ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಜಿಂಕೆ ಮಾಂಸ ತಂದು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹಾಗೂ 20 ಕೆ.ಜಿ ಜಿಂಕೆ ಮಾಂಸವನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.
ಕಾಚಗೊಂಡನಹಳ್ಳಿಯ ಅರುಮುಗ ಪ್ರಮುಖ ಆರೋಪಿಯಾಗಿದ್ದು ನಾಪತ್ತೆ ಯಾಗಿದ್ದಾನೆ. ಸೀಗೆಬಾಗಿಯ ಮುನ್ನ, ಸುರಗಿತೋಪಿನ ಚಂದ್ರಶೇಖರ್, ಹೊಸ ಸಿದ್ದಾಪುರ ಮೂರ್ತಿ ಬಂಧಿತ ಆರೋಪಿ ಗಳು. ಜಿಂಕೆ ಬೇಟೆಯಾಡಿ ಮಾಂಸ ತಂದು ಮಾರುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಮಿಲಿಟರಿ ಕ್ಯಾಂಪ್ ನ ಬಸ್ ನಿಲ್ದಾಣದ ಸಂತೆ ಮೈದಾನದ ಬಳಿ ಮಾಂಸದ ಜೊತೆಗೆ ಆರೋಪಿಗಳನ್ನು ಬಂಧಿಸಿದ್ದಾರೆ.
ಮಿಲಿಟರಿ ಕ್ಯಾಂಪ್ ನ ಬಸ್ ನಿಲ್ದಾಣದ ಸಂತೆ ಮೈದಾನದ ಬಳಿ ಮಾಂಸದ ಜೊತೆಗೆ ಆರೋಪಿಗಳನ್ನು ಬಂಧಿಸಿದ್ದಾರೆ.