ಭದ್ರಾವತಿ-ಮುದ್ದೆ ಅಲಿಯಾಸ್ ವಿಶ್ವನ ಮೇಲೆ ಅಟ್ಯಾಕ್..?

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ : ಟೀ ಕುಡಿಯಲು ಹೋಗಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಓಲ್ಡ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. 

    ವಿಶ್ವ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ಯುವಕ. ಭದ್ರಾವತಿ ನಗರದ ಅನ್ವರ್ ಕಾಲೋನಿಯಲ್ಲಿ ಘಟನೆ ನಡೆದಿದೆ.

    ನಗರದ ಹಳದಮ್ಮ ಬೀದಿಯ ನಿವಾಸಿ ಯಾದ ವಿಶ್ವ ಟೀ ಕುಡಿಯಲು ಹೋಗಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಎರಡು ಕೈ ತುಂಡಾಗುವ ರೀತಿ ಹಾಗೂ ಕುತ್ತಿಗೆ ಭಾಗಕ್ಕೆ ಹರಿತವಾದ ಆಯುಧದಿಂದ ಹಲ್ಲೆ ಮಾಡಲಾಗಿದೆ.

     ಗಾಯಾಳು ವಿಶ್ವನಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು