ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ : 2026-27 ನೇ ಸಾಲಿನ ಭದ್ರಾವತಿ ವಿ.ಐ.ಎಸ್.ಎಸ್.ಜಿ. ಸರ್ಕಾರಿ ಪಾಲಿಟೆಕ್ನಿಕ್, ಇಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ,
ಸಿವಿಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಮೆಟಲರ್ಜಿ ಇಂಜಿನಿಯರಿಂಗ್ ವಿಭಾಗಗಳಿಗೆ 02 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ (ವಿಜ್ಞಾನ/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈಗಾ ಗಲೇ ಪ್ರವೇಶ ಪ್ರಕ್ರಿಯೆ ಆರಂಭ ವಾಗಿದ್ದು, ಜೂ. 20 ರೊಳಗಾಗಿ ಸಂಸ್ಥೆಗೆ ಖುದ್ದಾಗಿ ಬಂದು ಪ್ರವೇಶ ಅರ್ಜಿ ಯನ್ನು ಸಲ್ಲಿಸುವಂತೆ ಪ್ರಾಚಾರ್ಯರು ತಿಳಿಸಿರುತ್ತಾರೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಮೊ.ಸಂ: 8762717968/8861931539/ 7975041134/ 9986406941/ 7259344203/ 9731283868/ 8277044910 ಸಂಖ್ಯೆಗಳನ್ನು ಸಂಪರ್ಕಿಸಬಹುದು.