ಭದ್ರಾವತಿ-ಪ್ರೋತ್ಸಾಹಧನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಸಮಾಜ ಕಲ್ಯಾಣ ಇಲಾಖೆ ಯಿಂದ 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.,ಪಿಯುಸಿ,ಪದವಿ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹ ಧನ ಪಡೆಯಲು ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಎಸ್.ಎಸ್.ಎಲ್.ಸಿ.ಯಲ್ಲಿ ಶೇ.60 ರಷ್ಟು ಅಂಕ ಗಳಿಸಿದವರಿಗೆ 7000/-, ಶೇ. 75 ಕ್ಕಿಂತ ಹೆಚ್ಚು ಅಂಕ ಗಳಿಸಿದ ವರಿಗೆ 15000/- ನೀಡಲಾಗುವುದು. ಪಿಯುಸಿ ವಿದ್ಯಾರ್ಥಿ ಗಳಿಗೆ 20000/-, ಪದವಿ ವಿದ್ಯಾರ್ಥಿಗಳಿಗೆ 25000/-, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30000/- ಹಾಗೂ ಕೃಷಿ ಎಂಜಿನಿಯ ರಿಂಗ್, ಪಶು ವೈದ್ಯಕೀಯ ಮತ್ತು ವೈದ್ಯಕೀಯ ಪದವಿ ವಿದ್ಯಾರ್ಥಿಗಳಿಗೆ 35000/- ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿ ಗಳು ಇಲಾಖೆಯ ವೆಬ್‌ಸೈಟ್ https://sw.karnataka.gov.in ಮೂಲಕ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

    ಹೆಚ್ಚಿನ ಮಾಹಿತಿಗಾಗಿ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು