ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಸೈಲ್-ವಿಐಎಸ್‌ಎಲ್ ವತಿಯಿಂದ ಉದ್ಯೋಗಿಗಳ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಶುಕ್ರವಾರ ನಗರದ ಭದ್ರಾ ಅತಿಥಿಗೃಹ ದಲ್ಲಿ ಆಯೊಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮ ದಲ್ಲಿ 2025-26 ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್. ಸಿ (10ನೇ ತರಗತಿ) ಮತ್ತು ದ್ವಿತೀಯ ಪಿ.ಯು.ಸಿ (12ನೇ ತರಗತಿ) ಪರೀಕ್ಷೆ ಯಲ್ಲಿ ಶೇ: 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನುಗಳಿಸಿದ ವಿಐಎಸ್‌ಎಲ್ ಕಾರ್ಖಾನೆಯ ಉದ್ಯೋಗಿಗಳ ಮಕ್ಕಳನ್ನು ಈ ಕಾರ್ಯಕ್ರಮದಲ್ಲಿ ಹತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಅನುಪ್ ಕುಮಾರ್, ವಿದ್ಯಾರ್ಥಿಗಳ ಅತ್ಯುತ್ತಮ ಶೈಕ್ಷಣಿಕ ಸಾಧನೆಯನ್ನು ಅಭಿನಂದಿಸಿ, ಪ್ರಶಂಸಾ ಪತ್ರಗಳು ಹಾಗೂ ನಗದು ಬಹುಮಾನ ಗಳನ್ನು ವಿತರಿಸಿದರು. ಜೊತೆಗೆ ಅವರ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಪರ ಜೀವನವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಿಐಎಸ್‌ಎಲ್ ಮಾನವ ಸಂಪನ್ಮೂಲ ಮುಖ್ಯ ಮಹಾ ಪ್ರಬಂಧಕ ಬಿ.ವಿಶ್ವನಾಥ, ಕಾರ್ಮಿಕರ ಸಂಘದ ಅಧ್ಯಕ್ಷ ಅಮೃತ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು, ಕಾರ್ಮಿಕರ ಸಂಘ ಮತ್ತು ಅಧಿಕಾರಿ ಗಳ ಸಂಘದ ಪದಾಧಿಕಾರಿಗಳು, ನೌಕರರು ಹಾಗೂ ಅವರ ಕುಟುಂಬದ ಸದಸ್ಯರು, ಪ್ರಶಸ್ತಿ ವಿಜೇತ ವಿದ್ಯಾರ್ಥಿ ಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ತಮ್ಮ ಅನುಭವಗಳನ್ನು ಹಂಚಿಕೊoಡು, ತಮ್ಮ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಸೈಲ್-ವಿಐಎಸ್‌ಎಲ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.
ನಗರಾಡಳಿತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ಮಹಾಪ್ರಬಂಧಕ ನವೀನ್ ರಾಹುಲ್ ಕಾರ್ಯಕ್ರಮ ನಿರೂಪಿಸಿದರು.