ಭದ್ರಾವತಿ-ಯುವಕನಿಗೆ 3 ವರ್ಷ ಕಠಿಣ ಜೈಲು!

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನೊಬ್ಬನಿಗೆ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 31,000 ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

2024ರಲ್ಲಿ ತಾಲ್ಲೂಕಿನ 20 ವರ್ಷದ ಯುವಕನೊಬ್ಬ, 16 ವರ್ಷದ ಅಪ್ರಾಪ್ತ ಬಾಲಕಿಯ ಪರಿಚಯ ಮಾಡಿಕೊಂಡು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದನು. ಈ ಸಂಬಂಧ ಸಂತ್ರಸ್ತೆಯ ಕಡೆಯವರು ನೀಡಿದ ದೂರಿನ ಮೇರೆಗೆ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡಿದ್ದ ಆಗಿನ ತನಿಖಾಧಿಕಾರಿ ಕವಿತಾ ಇ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾ ರೋಪಣ ಪತ್ರ ಸಲ್ಲಿಸಿದ್ದರು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು, ಆರೋಪಿ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 3 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 31,000 ದಂಡ ವಿಧಿಸಿ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ಶ್ರೀಧರ್ ವಾದ ಮಂಡಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು