ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಕಠಿಣ ಪರಿಶ್ರಮ ಹಾಗೂ ಏಕಾಗ್ರತೆಯಿಂದ ಯಾವುದೇ ಗುರಿಯನ್ನು ಮುಟ್ಟಬಹುದು ಎಂದು ನಗರದ ಸಾರ್ವಜನಿಕ ಆಸ್ಪತ್ರೆಯ ಡಾ: ಅರ್ಬಿಯಾ ಅಂಜುಮ್ ಹೇಳಿದರು.
ಅವರು ಬುಧವಾರ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮ ದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಡಾ:ಟಿ.ಬಿ.ಪ್ರಭಾಕರ ತಮ್ಮ ಪ್ರಾಥಮಿಕ ಹಾಗೂ ಪ್ರೌಢ ವಿದ್ಯಾಭ್ಯಾಸವನ್ನು ಪೂರೈಸಿ ಪ್ರಸ್ತುತ ವೈದ್ಯರಾಗಿ ಸೇವೆ ಯನ್ನು ಸಲ್ಲಿಸುತ್ತಿರುವ ಸೇವೆಯನ್ನು ವಿದ್ಯಾರ್ಥಿ ಗಳಿಗೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಯ ಅಧ್ಯಕ್ಷರು ಹಾಗೂ ವಿಶ್ವೇಶ್ವರಯ್ಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಿ.ಸಿದ್ದಬಸಪ್ಪ ಕಾರ್ಯಕ್ರಮ ಉದ್ಘಾಟಿಸಿ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.
ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ
ಡಾ.ಎಸ್. ಪಿ.ರಾಕೇಶ್ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾ ಸಂಸ್ಥೆಯಲ್ಲಿ ಬಹಳಷ್ಟು ವರ್ಷಗಳಿಂದ ನಡೆಸಿಕೊಂಡು ಬಂದಿರುವ ಅತ್ಯಂತ ಪ್ರಮುಖವಾದ ಸಂಪ್ರದಾಯಗಳಲ್ಲಿ ಒಂದಾದ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಮಹತ್ವದ ಬಗ್ಗೆ ಹಾಗೂ ನಮ್ಮದೇ ವಿದ್ಯಾಸಂಸ್ಥೆಯಲ್ಲಿ ಓದಿ ಇಂದು ಸಾಧಕರಾಗಿರುವ ಹಲವಾರು ವಿದ್ಯಾರ್ಥಿಗಳ ಯಶಸ್ಸು ಮುಂದಿನ ಪೀಳಿಗೆಗೆ ಮಾರ್ಗ ದರ್ಶನ ಹಾಗೂ ಪ್ರೇರಣಾದಾಯಕ ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಎಲ್ಲಾ ವಿಭಾಗಗಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಆಂಗ್ಲ ನಾಲ್ಕನೇ ತರಗತಿ ವಿದ್ಯಾರ್ಥಿ M. ಯಶವಂತ್ ಪ್ರಾರ್ಥಿಸಿ, ದೈಹಿಕ ಶಿಕ್ಷಣದ ರವಿ ಸ್ವಾಗತಿಸಿದರೆ, ಆಂಗ್ಲ ಪ್ರಾಥಮಿಕ ವಿಭಾಗದ ಶಿಕ್ಷಕರಾದ ಕವಿತಾ ನಿರೂಪಿಸಿದರು. ಆಂಗ್ಲ ಪ್ರಾಥಮಿಕ ವಿಭಾಗದ ಶಿಕ್ಷಕ ಹಿತೇಶ್ ಜಿ.ಎ. ವಂದಿಸಿದರು. ದೈಹಿಕ ಶಿಕ್ಷಕರಾದ ಪಿ.ರೇವತಿ ವೈದ್ಯರ ಪರಿಚಯಿಸಿದರು.