ಶಿವಮೊಗ್ಗ-ಅಜ್ಜಿಯ ಮರ್ಡರ್‌ ಮಾಡಿದ ಮೊಮ್ಮಗ? ಆರೋಪಿ ಕಾಲಿಗೆ ಪೊಲೀಸರಿಂದ ಫೈರ್..!

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ: ಗಾಂಜಾ ಮಾರಾಟ ವಿರೋಧಿಸಿದ ಅಜ್ಜಿಯನ್ನು ಕೊಲೆ ಮಾಡಿರುವ ಆರೋಪ ಹೊತ್ತಿರುವ ಮೊಮ್ಮಗನ ಕಾಲಿಗೆ ಪೊಲೀಸರು ಗುಂಡೇಟು ನೀಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ನಗರ ಹೊರವಲಯ ವಾಜಪೇಯಿ ಲೇಔಟ್‌ ನಲ್ಲಿ ಪೊಲೀಸರು ಕೊಲೆ ಆರೋಪಿ ಕಿಶೋರ್ (28) ಕಾಲಿಗೆ ಗುಂಡೇಟು ನೀಡಿದ್ದಾರೆ.ಆರೋಪಿ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ. ತಕ್ಷಣವೇ ದೊಡ್ಡಪೇಟೆ ಇನ್‌ಸ್ಪೆಕ್ಟರ್ ಗಾಳಿಯಲ್ಲಿ ಫೈರ್ ಮಾಡಿ ಆರೋಪಿಗೆ ಎಚ್ಚರಿಕೆ ನೀಡಿದ್ದರು. ಮಾತು ಕೇಳದ ಹಿನ್ನೆಲೆಯಲ್ಲಿ ಕಿಶೋರ್ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ.

ಗಾಯಾಳುವನ್ನು ಮೆಗ್ಗಾನ್‌ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಗಣೇಶ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು