ಎಸ್‌ಐಆರ್ ಕೆಲಸ ಮಾಡುತ್ತಿದ್ದ ವೇಳೆ ಬಿಎಲ್‌ಒ ಕುಸಿದು ಬಿದ್ದು ಸಾವು

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಎಸ್‌ಐಆರ್ ಕೆಲಸ ಮಾಡುತ್ತಿದ್ದ ವೇಳೆ ಬಿಎಲ್‌ಒ ಒಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ನಡೆದಿದೆ.

ಮಂಜುಳಾ(50) ಮೃತಪಟ್ಟ ಬಿಎಲ್ಓ. ಕಲ್ಲಾಪುರದ ಅಂಗನವಾಡಿ ಶಿಕ್ಷಕಿ ಆಗಿರುವ ಮಂಜುಳಾ ಸೋಮವಾರ ಮಧ್ಯಾಹ್ನ ಕೋಡಿ ಹೊಸೂರು ಗ್ರಾಮದ ಅಂಗನವಾಡಿಯಲ್ಲಿ ಎಸ್ಐಆರ್ ಕೆಲಸ ಮಾಡುತ್ತಿದ್ದರು.

ತಕ್ಷಣವೇ ಇತರ ಸಿಬ್ಬಂದಿ ಅವರನ್ನು ಅರಬಿಳಚಿ ಪ್ರಾಥಮಿಕ ಅರೋಗ್ಯಕ್ಕೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಬಿಎಲ್ಓ ಮಂಜುಳಾ ಮೃತಪಟ್ಟಿದ್ದಾರೆ.
ಮಂಜುಳಾ ಅವರು ಹೃದಯಾಘಾತ ದಿಂದ ಮೃತಪಟ್ಟಿರುವ ಶಂಕೆಯಿದೆ.

ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ತಹಶೀಲ್ದಾರ್ ಪ್ರದೀಪ್ ಭೇಟಿ ನೀಡಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು