ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ಗೃಹಲಕ್ಷ್ಮಿ ಯೋಜನೆಯ 31 ನೇ ಕಂತು ಬಿಡುಗಡೆಯಾಗುತ್ತಿದ್ದು ಇನ್ನೊಂದೆರಡು ದಿನಗಳಲ್ಲಿ ಫಲಾನುಭವಿ ಗಳಿಗೆ ಹಣ ಜಮಾ ಆಗಲಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ತಿಳಿಸಿದರು.
ಜಿ ಪಂ ಸಭಾಂಗಣದಲ್ಲಿ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ರಾಜ್ಯಾ ಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದದ ನಂತರ ಸಭೆಯನ್ನುದ್ದೇಶಿಸಿ ಅವರು ಮಾತ ನಾಡಿ, ಜಿಲ್ಲೆಯಲ್ಲಿ ಸರ್ಕಾರದ ಮಹತ್ವಾ ಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವು ಯಶಸ್ವಿಯಾಗಿ ಮುನ್ನಡೆಯುತ್ತಿವೆ ಎಂದರು.
ಗೃಹಲಕ್ಷ್ಮಿ ಯೋಜನೆ:
ಶಿವಮೊಗ್ಗ ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 31ನೇ ಕಂತಿನ ಹಣ ಬಿಡುಗಡೆ ಯಾಗಿದ್ದು ಜಿಲ್ಲೆಯ ಒಟ್ಟು 3,79,858 ಅರ್ಹ ಮಹಿಳಾ ಫಲಾನುಭವಿ ಗಳಿಗೆ ಈ ಕಂತಿನ ಲಾಭ ಸಿಗಲಿದೆ.
ಒಟ್ಟು ರೂ. 75.97 ಕೋಟಿ ಹಣ ಬಿಡುಗಡೆ ಯಾಗಿದೆ. ಪ್ರತಿಯೊಬ್ಬ ಫಲಾನುಭವಿಯ ಖಾತೆಗೆ ತಲಾ 2,000 ರೂ. ಹಣವು ಮುಂದಿನ ಒಂದೆರಡು ದಿನಗಳಲ್ಲಿ ನೇರವಾಗಿ ಜಮೆಯಾಗಲಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 30 ಕಂತುಗಳಲ್ಲಿ ಡಿ.ಬಿ.ಟಿ. ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಒಟ್ಟು 3,110.48 ಕೋಟಿಗೂ ಅಧಿಕ ರೂಪಾಯಿ ಜಮೆಯಾಗಿದೆ.
ಮೃತರ ಖಾತೆಯಿಂದ ಹಣ ವಾಪಸ್: ಜಿಲ್ಲೆಯಲ್ಲಿ ಮರಣ ಹೊಂದಿದ 9,247 ಫಲಾನುಭವಿಗಳನ್ನು ಗುರುತಿಸ ಲಾಗಿದ್ದು, ತಾಂತ್ರಿಕ ಕಾರಣಗಳಿಂದ ಅವರ ಖಾತೆಗೆ ಜಮೆಯಾಗಿದ್ದ ಹಣವನ್ನು ಹಿಂಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಈ ಪೈಕಿ ಈಗಾಗಲೇ 3,600 ಫಲಾನುಭವಿಗಳಿಂದ 3,79,82,000 ರೂ.ಗಳನ್ನು ಯಶಸ್ವಿ ಯಾಗಿ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆ-ಸಮೀಕ್ಷೆ:
ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆ ಯಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರ ಮಾಹಿತಿ ಪರಿಶೀಲನಾ ಕಾರ್ಯವು ಜು:1 ರಿಂದ ಆರಂಭವಾಗಿದೆ. ಈ ಕುರಿತು ಸಾರ್ವಜನಿ ಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಮನೆ ಬಾಗಿಲಿಗೆ ಮೆಸ್ಕಾಂ ಸಿಬ್ಬಂದಿ:
ಮೆಸ್ಕಾಂ ಮೀಟರ್ ರೀಡರ್‌ಗಳು ಮತ್ತು ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಫಲಾನುಭವಿಗಳು ಈ ಸಮೀಕ್ಷೆಗಾಗಿ ಮೆಸ್ಕಾಂ ಕಚೇರಿಗೆ ಅಲೆಯುವ ಅಗತ್ಯವಿಲ್ಲ.
ಉಚಿತ ವಿದ್ಯುತ್ ಸ್ಥಗಿತವಾಗಲ್ಲ:
ಈ ಸಮೀಕ್ಷೆಯು ಕೇವಲ ಫಲಾನು ಭವಿಗಳ ವಿವರಗಳನ್ನು ಅಪ್‌ಡೇಟ್ ಮಾಡಿಕೊಳ್ಳುವ ಸಾಮಾನ್ಯ ಪ್ರಕ್ರಿಯೆ ಯಾಗಿದ್ದು, ಯಾವುದೇ ಕಾರಣಕ್ಕೂ ಉಚಿತ ವಿದ್ಯುತ್ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ.
ಜಿಲ್ಲೆಯಲ್ಲಿ ಯೋಜನೆಗೆ ನೋಂದಣಿ ಯಾಗಿರುವ ಒಟ್ಟು 5,09,133 ಗೃಹಗಳಲ್ಲಿ ಈಗಾಗಲೇ 1,38,566 ಮನೆಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಶೇ. 29 ರಷ್ಟು ಪ್ರಗತಿ ಸಾಧಿಸಲಾಗಿದೆ. ಸಾರ್ವಜನಿಕರು ಸಿಬ್ಬಂದಿಗೆ ಅಗತ್ಯ ದಾಖಲೆ ನೀಡಿ ಸಹಕರಿಸುವಂತೆ ಕೋರಿದರು.
ಅನ್ನಭಾಗ್ಯ ಯೋಜನೆ: ರೋಗಿಗಳಿಗೆ 15 ದಿನಗಳಲ್ಲಿ ಬಿಪಿಎಲ್ ಕಾರ್ಡ್ ತುರ್ತು ಆರೋಗ್ಯ ಸೇವೆಗಳ ಕಾರಣ ಕ್ಕಾಗಿ ಬಿ.ಪಿ.ಎಲ್. ಕಾರ್ಡ್ ಕೋರಿ ಅರ್ಜಿ ಸಲ್ಲಿಸುವ ಸಾರ್ವಜನಿಕರಿಗೆ ಸರ್ಕಾರ ಉತ್ತಮ ಅವಕಾಶ ನೀಡಿದೆ. ಅನಾರೋಗ್ಯ ಪೀಡಿತರಿಗೆ ಯಾವುದೇ ವಿಳಂಬವಿಲ್ಲದೆ 15 ದಿನಗಳ ಒಳಗಾಗಿ ಕಾರ್ಡ್ ವಿತರಿಸುವಂತೆ ಸರ್ಕಾರವು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ಸಿ.ಎಸ್. ಚಂದ್ರಭೂಪಾಲ ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಎಂ ಎಸ್ ಬಸವರಾಜಪ್ಪ, ಆರ್ ಶಿವಣ್ಣ, ಇಕ್ಕೇರಿ ರಮೇಶ್ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್ ಎಂ ಮಧು, ಸದಸ್ಯರು ಗಳಾದ ಅಮೀರ್ ಅಮ್ಜಾ, ಎಸ್ ಪ್ರಭಾಕರ್, ಭವ್ಯ ಕೃಷ್ಣಮೂರ್ತಿ, ಎಂ ರಾಹುಲ್, ಅರ್ಚನಾ, ಎನ್ ನವುಲೇಶ್, ಯು ಶಿವಾನಂದ, ಕೆ ಉದಯಕುಮಾರ್, ಎಚ್ ಬಿ ಚಿದಂಬರ, ಎಚ್ ಕೆ ಜಯಶೀಲಪ್ಪ ಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಸಿಡಿಪಿಓ ಗಂಗೂಬಾಯಿ, ಮೆಸ್ಕಾಂ ಇಲಾಖೆ ನಿಯಂತ್ರಣಾಧಿಕಾರಿ ಚಂದ್ರಕಲಾ, ಇತರೆ ಅಧಿಕಾರಿಗಳು ಹಾಜರಿದ್ದರು.
Tags
ಗೃಹಲಕ್ಷ್ಮಿ ಯೋಜನೆ