ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಕಾಂಗ್ರೆಸ್ ಪಕ್ಷದ ಸಿದ್ಧಾಂತ ತಂದೆಯವರ ಕಾಲದಿಂದ ಮೈಗೂಡಿಸಿ ಕೊಂಡು ಬಂದಿರುವುದಾಗಿ ಡಾ:ಎಸ್. ಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೇಳಿಕೆಯಲ್ಲಿ ತಿಳಿಸಿರುವ ಅವರು ಮೊಟ್ಟ ಮೊದಲನೇ ಬಾರಿಗೆ 2000 ರಿಂದ ವಿದ್ಯಾರ್ಥಿ ಕಾಂಗ್ರೆಸ್ ಸಹ ಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸಿ, 2003 ರಲ್ಲಿ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಾಗಿ ಸೇವೆ, 2007 ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಎಸ್ ಸಿ/ ಎಸ್ ಟಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, 2020 ರಲ್ಲಿ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಹಾಗೂ ನೌಕರರ ವಿಭಾಗದ ರಾಜ್ಯ ಕಾರ್ಯದರ್ಶಿ ಯಾಗಿ, ಜಿಲ್ಲಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಲ್ಲದೆ 2023 ರ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿರುವುದಾಗಿ ತಿಳಿಸಿದರು.
ನಿಗಮ ಮಂಡಳಿ ಸ್ಥಾನಕ್ಕೆ ಆಕಾಂಕ್ಷಿ: ಸುಮಾರು 26 ವರ್ಷಗಳಿಂದ ಸಕ್ರಿಯ ವಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿರುವ ನಾನು ಪ್ರಸ್ತುತ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿ ದ್ದೇನೆ. ಪಕ್ಷ ನನ್ನ ಪ್ರಾಮಾಣಿಕತೆ ಗುರುತಿಸಿ ಯಾವುದಾದರೂ ನಿಗಮ ಮಂಡಳಿ ಸ್ಥಾನ ನೀಡಲಿ. ಇದಕ್ಕೆ ಹಿರಿಯ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್ ಹಾಗೂ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ರವರುಗಳು ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ರವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಅಲ್ಲದೆ ನನ್ನ ಸೇವೆಗೆ ಹುದ್ದೆ ಲಭಿಸುವುದು ಖಚಿತ ಎಂದು ತಿಳಿಸಿದ್ದಾರೆ.
ಕೆಪಿಸಿಸಿ (ಕೆಕೆಸಿ) ರಾಜ್ಯ ಕಾರ್ಯ ದರ್ಶಿಯಾಗಿ, 2023 ರಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಪ್ರಬಲ ಆಕಾಂಕ್ಷಿ ಯಾಗಿದ್ದು,ಕೊನೆಯ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿದ ಕಾರಣ ಕಾಂಗ್ರೆಸ್ ಪಕ್ಷದಲ್ಲಿ ಉಳಿದು ಪಕ್ಷಕ್ಕಾಗಿ ತ್ಯಾಗ ಮಾಡಿರುವುದಾಗಿ ತಿಳಿಸಿದ್ದಾರೆ.
ಡಾ:ಎಸ್.ಕೃಷ್ಣ ರವರಿಗೆ ಡಾ:ಜಗಜೀವನ್ ರಾಂ ಚರ್ಮ ಕೈಗಾರಿಕಾ ನಿಗಮ, ಅದಿಜಾoಭವ ಅಭಿವೃದ್ಧಿ ನಿಗಮ ಅಥವಾ ಯಾವು ದಾದರೂ ಅಭಿವೃದ್ಧಿ ನಿಗಮಗಳಲ್ಲಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಮಾಜಿ ಮಂತ್ರಿಗಳು ಹಾಗೂ ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ರವಾನಿಸಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಇದಲ್ಲದೆ ತಾವೇ ಖುದ್ದಾಗಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರನ್ನು ಭೇಟಿ ಮಾಡಿ ಮನವಿ ಮಾಡಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಭಿಮಾನಿ ಬಳಗದ ಮನವಿ:-
ಅಂದು ಕಾಂಗ್ರೆಸ್ ಇಂದು ಕಾಂಗ್ರೆಸ್
ನಾ ಎಂದೆಂದಿಗೂ ಕಾಂಗ್ರೆಸ್
ಡಾ.ಎಸ್.ಕೃಷ್ಣ ರವರಿಗೆ ನಿಗಮ ಮಂಡಳಿ ಸ್ಥಾನ ನೀಡಿ:-
ಡಾ ಎಸ್ ಕೃಷ್ಣ ರವರು ಮೊಟ್ಟ ಮೊದಲನೇ ಬಾರಿಗೆ 2000 ರಿಂದ ವಿದ್ಯಾರ್ಥಿ ಕಾಂಗ್ರೆಸ್ ಸಹ ಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸಿ, ನಂತರ 2003 ರಲ್ಲಿ ಹೊಳೆ ಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು2007 ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಎಸ್ ಸಿ ಎಸ್ ಟಿ. ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಂತರ 2020 ರಲ್ಲಿ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಹಾಗೂ ನೌಕರರ ವಿಭಾಗದ ರಾಜ್ಯ ಕಾರ್ಯದರ್ಶಿ ಯಾಗಿ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಲ್ಲದೆ, 2023ರ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿ ಯಾಗಿದ್ದರು ಮತ್ತು ಸುಮಾರು 26 ವರ್ಷಗಳಿಂದ ಸಕ್ರಿಯವಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿರುತ್ತಾರೆ, ಹಾಗೂ ಒಬ್ಬ ವಿದ್ಯಾವಂತ ನ್ಯಾಯವಾದಿ ಯಾಗಿ ಅನೇಕ ಬಡ ಕುಟುಂಬಗಳಿಗೆ ಉಚಿತ ಆರೋಗ್ಯ ಸೇವೆ ಸಹ ಕೊಡಿಸಿದ್ದಾರೆ ಆದಕಾರಣ ಇವರಿಗೆ ಕರ್ನಾಟಕ ಸರ್ಕಾರ ದಲ್ಲಿ ಯಾವುದಾದರೂ ಒಂದು ನಿಗಮ ಮಂಡಳಿ ಸ್ಥಾನಕ್ಕೆ ಅಧ್ಯಕ್ಷರನ್ನಾಗಿ, ಮಾಡಬೇಕೆಂದು ನನ್ನೆಲ್ಲಾ ರಾಜ್ಯ ನಾಯಕರಲ್ಲಿ ಕೇಳಿಕೊಳ್ಳುತ್ತಿದ್ದೇವೆ.
(ಡಾ. ಎಸ್ ಕೃಷ್ಣ ರವರ ಅಭಿಮಾನಿಗಳ ಬಳಗ)