ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮಂಗಳೂರಿನ ಬಿಸಿ ರೋಡ್ ಬಸ್ ನಿಲ್ದಾಣದ ಬಳಿ ಲಾವಣ್ಯ ಎಂಬ ಯುವತಿಯ ಹತ್ಯೆ ಪ್ರಕರಣವನ್ನು ಖಂಡಿಸಿ, ಆರೋಪಿ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಮಹಿಳೆ ಯರ ಸುರಕ್ಷತೆಯನ್ನು ಬಲಪಡಿಸು ವಂತೆ ಶನಿವಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವಿಭಾಗದ ವತಿಯಿಂದ ಮನವಿ ಸಲ್ಲಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ವಿಭಾಗದ ಅಧ್ಯಕ್ಷೆ ವಾಣಿ ರವಿ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು,ಇಂತಹ ಘಟನೆಗಳು ಸಮಾಜದಲ್ಲಿ ಆತಂಕವನ್ನು ಉಂಟು ಮಾಡುತ್ತಿದ್ದು, ನಾಗರಿಕ ಸಮಾಜ ತಲೆಭಾಗಿಸುವಂತಹ ಘಟನೆ ನಡೆದಿದ್ದು ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ ಎಂದರು.
ಈ ಪ್ರಕರಣದಲ್ಲಿ ಬಂಧಿತ ಆರೋಪಿಯ ವಿರುದ್ಧ ಕಾನೂನಿನಡಿ ಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸರ್ಕಾರದ ಮೂಲಕ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿದರು.
ರಾಜ್ಯದಾದ್ಯಂತ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣ ಗೊಳಿಸಿ,ನ್ಯಾಯಾಲಯದಲ್ಲಿ ಪರಿಣಾಮಕಾರಿಯಾಗಿ ವಿಚಾರಣೆ ನಡೆಸುವಂತೆ ಕ್ರಮ ಕೈಗೊಳ್ಳಬೇಕು,
ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು,ಬಸ್ ನಿಲ್ದಾಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಪೊಲೀಸ್ ಗಸ್ತು ಮತ್ತು ಭದ್ರತಾ ವ್ಯವಸ್ಥೆಯನ್ನು ಬಲಪಡಿಸಬೇಕು.ಮಹಿಳೆಯರ ಸುರಕ್ಷತೆಗೆ ಸಿಸಿಟಿವಿ, ತುರ್ತು ಸಹಾಯ ವಾಣಿ ಹಾಗೂ ಇತರ ಭದ್ರತಾ ಕ್ರಮ ಗಳನ್ನು ಜಾರಿಗೊಳಿಸಬೇಕು. ಮಹಿಳೆಯರ ವಿರುದ್ಧದ ಅಪರಾಧ ಗಳನ್ನು ತಡೆಗಟ್ಟಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸು ವಂತೆ ಮನವಿಯಲ್ಲಿ ಅಗ್ರಹಿಸಿದ ಪ್ರತಿಭಟನಾಕಾರರು, ತಹಸಿಲ್ದಾರ್ ರವರ ಮುಖಾಂತರ ಗೃಹಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗೀತಾ, ವಿನೋದ ಬಾಯಿ, ಪಾರ್ವತಿ, ರೂಪಶ್ರೀ, ಅಂಬಿಕಾ, ಶಾಂತ ಬಾಯಿ, ಮೀರಾ ಬಾಯಿ, ಸುಮಿತ್ರ ಸೇರಿದಂತೆ ಅನೇಕರು ಭಾಗವಹಿಸಿದ್ದರು.