ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮುಂಗಾರು ಮಳೆ ಕೊರತೆ ಯಿಂದ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹದ ಪ್ರಮಾಣ ಸಂಪೂರ್ಣ ಇಳಿಕೆ ಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನ ಬೆಳೆಗಳಿಗೆ ಡ್ಯಾಂನಿಂದ ನೀರು ಬಿಡುಗಡೆ ಮಾಡದಿರಲು ನಿರ್ಧರಿಸಲಾಗಿದೆ.
ಈ ಕುರಿತಂತೆ ಇಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ವಿವರ ಮುಂದಿನಂತಿದೆ :
ಭದ್ರಾ ಜಲಾಶಯದ ಅಚ್ಚುಕಟ್ಟು ದಾರರಿಗೆ ಈ ಮೂಲಕ ತಿಳಿಯಪಡಿ ಸುವುದೇನೆಂದರೆ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆ ಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ.
ಆದಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗು ವುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿ ರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿ ರುವ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆ ಯೊಂದಿಗೆ ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.
ಮುಂಬರುವ ದಿನಗಳಲ್ಲಿ ಸಾಕಷ್ಟು ಪ್ರಮಾಣ ದಲ್ಲಿ ಮಳೆಯಾಗಿ ಜಲಾಶಯ ಭರ್ತಿ ಯಾದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಆಯೋಜಿಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳ ಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.