ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ : ಎಸ್‌ಐಆರ್ ಪ್ರಕ್ರಿಯೆ ಯಲ್ಲಿ ನಿರತರಾಗಿದ್ದ ಬೂತ್ ಮಟ್ಟದ ಮಹಿಳಾ ಅಧಿಕಾರಿ, ಶಿಕ್ಷಕಿ ಮಂಜುಳಾ (50) ಇವರು ಸೋಮವಾರ ಮೃತ ಪಟ್ಟಿದ್ದು, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಹಾಗೂ ಅಧಿಕಾರಿಗಳು ಮಂಗಳವಾರ ಮೃತರ ಮನೆಗೆ ಭೇಟಿ ನೀಡಿ ಪಾರ್ಥೀವ ಶರೀರ ದರ್ಶನ ಪಡೆದು, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಭದ್ರಾವತಿ ತಾಲ್ಲೂಕಿನ ಕಲ್ಲಾಪುರ ಬಳಿ ಕೋಡಿ ಹೊಸೂರು ಗ್ರಾಮದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಿರತ ರಾಗಿದ್ದಾಗ ಇದ್ದಕ್ಕಿದ್ದಂತೆ ಅವರು ಕುಸಿದು ಬಿದ್ದು ಮೃತಪಟ್ಟಿರುತ್ತಾರೆ. ಮೃತರ ಪಾರ್ಥಿವ ಶರೀರದ ದರ್ಶನ ಪಡೆದು, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಅಧಿಕಾರಿಗಳು, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.
ಕರ್ತವ್ಯದಲ್ಲಿದ್ದಾಗಲೇ ಮರಣ ಹೊಂದಿದ ಬಿಎಲ್‌ಓ ಅವರ ಕುಟುಂಬಕ್ಕೆ ಸರ್ಕಾರದ ನಿಯಮಾವಳಿ ಗಳನ್ವಯ ಸಿಗಬೇಕಾದ ಸೌಲಭ್ಯ ಹಾಗೂ ಪರಿಹಾರದ ಕುರಿತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಗಳಾದ ನಿಖಿಲ್, ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ, ತಹಶೀಲ್ದಾರ್ ಹಾಜರಿದ್ದರು.