ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಕಳೆದೆರೆಡು ದಿನಗಳಿಂದ ಬೀಳುತ್ತಿರುವ ನಿರಂತರ ಮಳೆಯಿಂದ ಭದ್ರಾ ಹಾಗೂ ತುಂಗಾ ಜಲಾಶಯಗಳ ಒಳಹರಿವಿ ನಲ್ಲಿ ನಿರಂತರ ಏರಿಕೆ ಕಂಡು ಬರಲಾರಂಭಿಸಿದೆ.
ಆ: 02 ರ ಮಾಹಿತಿಯಂತೆ ಭದ್ರಾ ಡ್ಯಾಂ ಒಳಹರಿವು 31,874 ಕ್ಯೂಸೆಕ್ ಗೆ ಏರಿಕೆಯಾಗಿದೆ. 185 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 160 ಅಡಿ 3 ಇಂಚು (ಗರಿಷ್ಠ ಮಟ್ಟ : 186) ಇದೆ.
ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 180 ಅಡಿ 5 ಇಂಚು ಇತ್ತು. ಮಳೆ ಕೊರತೆಯಿಂದ ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ ಸರಿಸುಮಾರು 20 ಅಡಿಯಷ್ಟು ಕಡಿಮೆ ನೀರು ಸಂಗ್ರಹವಾಗಿದೆ.