ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲ್ಲೂಕಿನ ಹುಣಸಘಟ್ಟ ಶಾಖೆ ವ್ಯಾಪ್ತಿಯ ಸಾವೆಮರಡಿ ಕಾವಲ್ ಗ್ರಾಮದ ಸರ್ವೆ ನಂಬರ್ 2ರ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಅಕ್ರಮ ವಾಗಿ ಶ್ರೀಗಂಧದ ಮರಗಳನ್ನು ಕಡಿತ ಮಾಡಿದ್ದ ಆರೋಪದ ಮೇಲೆ ಆರು ಮಂದಿ ಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಹರೀಶ್ ಕೆ.ಆರ್.ವಲಯ ಅರಣ್ಯಾಧಿಕಾರಿ ಗಳ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಲು ಮುಂದಾಗಿದ್ದ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಅಧಿಕಾರಿ ಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಕಾರ್ಯಾಚರಣೆಯ ವೇಳೆ ಅರಣ್ಯ ಪ್ರದೇಶ ದಲ್ಲಿ ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿತ ಮಾಡಿರುವುದು ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ದಂತೆ ಒಟ್ಟು ಆರು ಮಂದಿ ಆರೋಪಿ ಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಅರಣ್ಯ ಇಲಾಖೆಯಿಂದ ಅರಣ್ಯ ಮೊಕದ್ದಮೆ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಅರಣ್ಯ ಇಲಾಖೆಯ ದಾಖಲೆಗಳ ಪ್ರಕಾರ, ಘಟನೆಗೆ ಸಂಬಂಧಿಸಿದಂತೆ 2026-27ನೇ ಸಾಲಿನ ಅರಣ್ಯ ಮೊಕದ್ದಮೆ ದಾಖಲಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಬಳಿಕ ನ್ಯಾಯಾಲಯದ ಆದೇಶದಂತೆ ಆರು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಶ್ರೀಗಂಧವು ಅತ್ಯಂತ ಮೌಲ್ಯಯುತ ಹಾಗೂ ಸಂರಕ್ಷಿತ ಅರಣ್ಯ ಸಂಪತ್ತಾ ಗಿದ್ದು, ಅದರ ಅಕ್ರಮ ಕಡಿತ ಮತ್ತು ಸಾಗಾಟದ ವಿರುದ್ಧ ಅರಣ್ಯ ಇಲಾಖೆ ನಿರಂತರವಾಗಿ ನಿಗಾ ವಹಿಸುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಅನುಮಾನಾ ಸ್ಪದ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಹುಣಸಘಟ್ಟ ಶಾಖೆ ವ್ಯಾಪ್ತಿಯಲ್ಲಿ ಅಕ್ರಮ ಅರಣ್ಯ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಮುಂದುವರಿ ಯಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.