ಭದ್ರಾವತಿ-ಸಹಕಾರ ಮಹಾ ಮಂಡಳಿ ನಿರ್ದೇಶಕರಾಗಿ ಬಿ.ಕೆ. ಶಿವಕುಮಾ‌ರ್ ಆಯ್ಕೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿಯ ಶಿವಮೊಗ್ಗ ಜಿಲ್ಲಾ ಸಹಕಾರ ಕ್ಷೇತ್ರದ ಪ್ರತಿನಿಧಿ ಸ್ಥಾನಕ್ಕೆ ಮಂಗಳವಾರ ಬೆಂಗಳೂರಿನಲ್ಲಿ ನಡೆದ ಚುನಾವಣೆಯಲ್ಲಿ ಬಿ.ಕೆ.ಶಿವಕುಮಾರ್ ಅಭೂತ ಪೂರ್ವ ಗೆಲುವು ಸಾಧಿಸಿದ್ದಾರೆ. ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರೆ ಸಹಕಾರಿ ಕ್ಷೇತ್ರದ ಗಣ್ಯರು ಅಭಿನಂದಿಸಿದ್ದಾರೆ.

    ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶದಂತೆ ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಸಲಹೆ ಮೇರೆಗೆ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಸ್ಪರ್ಧಿಸಿದ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಹಾಗೂ ನಗರದ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ. ಕೆ.ಶಿವಕುಮಾ‌ರ್ ಗೆಲುವು ಸಾಧಿಸಿದ್ದಾರೆ.

   ಶಿವಕುಮಾರ್ ಅವರನ್ನು ಸಹಕಾರ ಸಚಿವ ಲಕ್ಷ್ಮಣ ಸವದಿ, ಮಹಾ ಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಎಸ್.ಟಿ.ಸೋಮ ಶೇಖರ್, ವಿನಯ್ ಕುಲಕರ್ಣಿ, ಶಾಸಕರಾದ ಬಿ.ಕೆ.ಸಂಗಮೇಶ್ವರ್, ಶಾಂತನಗೌಡ, ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗಿರೀಶ್ ಮತ್ತಿತರರು ಅಭಿನಂದಿಸಿದ್ದಾರೆ.

    ಈ ಸಂದರ್ಭ ಕ್ಷೇತ್ರದ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಎಚ್.ಎಲ್. ಷಡಾಕ್ಷರಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ್, ತಾಲೂಕು ವಿದ್ಯುತ್ ಗ್ರಾಹಕರ ಸಮಿತಿ ಅಧ್ಯಕ್ಷ ಬಸವಂತಪ್ಪ, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ದಶರಥಗಿರಿ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಲೋಕೇಶ್ ಮತ್ತಿತರರು ಹಾಜರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು