ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ಮೂವರು ಆರೋಪಿ ಗಳನ್ನು ಬಂಧಿಸಿ, ಒಟ್ಟು 1 ಕೆಜಿ 725 ಗ್ರಾಂ ಗಾಂಜಾವನ್ನು ವಶಪಡಿಸಿ ಕೊಂಡಿದ್ದಾರೆ.
ಜಪ್ತಿಯಾಗಿರುವ ಗಾಂಜಾದ ಒಟ್ಟು ಮೌಲ್ಯ ಸುಮಾರು 81,350 ರೂ. ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದನೇರಳೆಕೆರೆ ಸಿದ್ದರಮಟ್ಟಿ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿ ಆಧರಿಸಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕಿ ಶಿಲ್ಪಾ ಎನ್. ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು.
ದಾಳಿಯ ವೇಳೆ ಗಾಂಜಾ ಮಾರಾಟ ದಲ್ಲಿ ತೊಡಗಿದ್ದ ಅಭಿಶೇಕ್ ನಾಯಕ್ @ ಅಭಿ ಹಾಗೂ ಆರೀಫ್ ಉಲ್ಲಾ @ ತೌಸಿಫ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 31,350 ರೂ. ಮೌಲ್ಯದ 627 ಗ್ರಾಂ ಗಾಂಜಾವನ್ನು ಜಪ್ತಿ ಮಾಡಲಾ ಗಿದೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.