ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ನಗರದ ಶ್ರೀ ಬೀರೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಬಿ.ಕೆ ಶಿವಕುಮಾರ್ ಅವರನ್ನು ಸೊಸೈಟಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರರಾಗಿರುವ ಬಿ.ಕೆ ಶಿವಕುಮಾರ್, ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿ ವೃದ್ಧಿ ಬ್ಯಾಂಕ್ ಅಧ್ಯಕ್ಷರು ಹಾಗು ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರು ಮತ್ತು ಟಿಎಪಿಸಿಎಂಎಸ್ ನಿರ್ದೇಶಕರು ಸಹ ಆಗಿದ್ದಾರೆ. ಶ್ರೀ ಬೀರೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಇವರನ್ನು ಸನ್ಮಾನಿಸಿ ಸೊಸೈಟಿಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊ ಯ್ಯುವಂತೆ ಮನವಿ ಮಾಡಲಾಯಿತು.
ಸೊಸೈಟಿ ಉಪಾಧ್ಯಕ್ಷ ರಾಜಶೇಖರ ಉಪ್ಪಾರ, ನಿರ್ದೇಶಕರಾದ ಬಸವಂತಪ್ಪ, ಸುರೇಶ್ ವರ್ಮಾ, ಸೊಸೈಟಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.