ಭದ್ರಾವತಿ-ಪೊಲೀಸ್ ಇಲಾಖೆಗೆ ನಾಲ್ಕು ವಾಹನಗಳ ಹಸ್ತಾಂತರ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ : ಯೂನಿಯನ್ ಬ್ಯಾಂಕ್ ಸೋಷಿಯಲ್ ಫೌಂಡೇಷನ್ ವತಿಯಿಂದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹಯೋಗ ದೊಂದಿಗೆ ಪೊಲೀಸ್ ಉಪವಿಭಾಗಕ್ಕೆ 4 ವಾಹನಗಳನ್ನು ಹಸ್ತಾಂತರಿಸ ಲಾಯಿತು. 

    ಮಂಗಳವಾರ ಹಳೇನಗರದ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ .ಬಿ ಅವರಿಗೆ ವಾಹನಗಳನ್ನು ಹಸ್ತಾಂತರಿ ಸುವ ಮೂಲಕ ಹಸಿರು ನಿಶಾನೆ ತೋರಿಸಿದರು.
  
    ನಗರಸಭೆ ಉಪಾಧ್ಯಕ್ಷ ಬಷೀರ್ ಅಹಮದ್, ಸದಸ್ಯರಾದ ಚನ್ನಪ್ಪ, ಸುದೀಪ್ ಕುಮಾರ್,ಆಡಿಷನಲ್ ಎಸ್ ಪಿ, ಎ.ಜಿ ಕಾರಿಯಪ್ಪ, ಪೌರಾಯುಕ್ತ ಕೆ.ಎನ್ ಹೇಮಂತ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಧಿಕಾರಿ ಆಶಾಲತಾ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಮುಖಂಡರಾದ ಬಿ.ಎಸ್. ಬಸವೇಶ್, ವೈ.ನಟರಾಜ್ ಇತರರಿದ್ದರು. 

    ಉಪವಿಭಾಗದ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಪೊಲೀಸ್ ನಗರ ವೃತ್ತ ನಿರೀಕ್ಷಕರು, ವಿವಿಧ ಠಾಣೆಗಳ ಉಪ ನಿರೀಕ್ಷಕರು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು