ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ : ಮೆಸ್ಕಾಂ ನಗರ ಉಪ ವಿಭಾಗ ಕಛೇರಿಯಲ್ಲಿ ಅ.22ರ ಗುರುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಸಭೆಯಲ್ಲಿ ಶಿವಮೊಗ್ಗ ವೃತ್ತ ಅಧೀಕ್ಷಕ ಅಭಿಯಂತರರು ಹಾಗು ನಗರದ ಕಾರ್ಯ ನಿರ್ವಾಹಕ ಅಭಿಯಂತರರು ಮತ್ತು ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಹಾಗು ಇನ್ನಿತರ ಅಧಿಕಾರಿಗಳು ಉಪಸ್ಥಿತ ರಿರುವರು. ನಗರ ಪ್ರದೇಶದ ಗ್ರಾಹಕರು ಪಾಲ್ಗೊಳ್ಳುವಂತೆ ನಗರ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಕೋರಿದ್ದಾರೆ.