ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ಕೆಪಿಸಿಸಿ ಕಾರ್ಮಿಕ ವಿಭಾಗದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಶಾಂತವೀರನಾಯಕ ಇವರಿಗೆ ಸೆ: 28ರಂದು ಭವ್ಯ ಸ್ವಾಗತ ಕೋರಲು ಅಭಿಮಾನಿಗಳು ಸಕಲ ಸಿದ್ದತೆಯನ್ನು ಮಾಡಿಕೊಂಡಿದ್ದಾರೆ.
ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ, ಸೆ: 28 ರ ಬೆಳಿಗ್ಗೆ 10.30ಕ್ಕೆ ಎಂ.ಆರ್.ಎಸ್ ಸರ್ಕಲ್ ನಲ್ಲಿ ನೂತನ ಅಧ್ಯಕ್ಷರನ್ನು ಭವ್ಯವಾಗಿ ಸ್ವಾಗತಿಸಿ, ಬೃಹತ್ ಬೈಕ್ ರ್ಯಾಲಿ ಮುಖಾಂತರ ಮೆರವಣಿಗೆಯ ಮೂಲಕ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಕರೆತರಲಾಗುವುದು.
ಬೆ.11 ಘಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಸಿ.ಯೋಗೀಶ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮ ದಲ್ಲಿ ನೂತನ ಅಧ್ಯಕ್ಷ ರನ್ನು ಸನ್ಮಾನಿಸಲಾಗುವುದು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ, ಶಾಸಕರುಗಳಾದ, ಬಿ.ಕೆ.ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಬಲ್ಕೀಶ್ ಬಾನು, ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಡಾ.ಆರ್.ಎಂ.ಮಂಜುನಾಥ ಗೌಡ, ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಲ್ಲವಿ, ಜವಳಿ ಅಭಿವೃದ್ದಿ ನಿಗಮದ ಅಧ್ಯಕ್ಷ ಚೇತನಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಯೋಜನಾ ಸಮಿತಿ ಅಧ್ಯಕ್ಷ ಚಂದ್ರಭೂಪಾಲ್, ಕಾಂಗ್ರೆಸ್ ಮುಖಂಡರುಗಳಾದ ಕಿಮ್ಮನೆ ರತ್ನಾಕರ್, ಆಯನೂರು ಮಂಜುನಾಥ್, ಗೋಣಿ ಮಾಲತೇಶ್, ಡಾ. ಶ್ರೀನಿವಾಸ ಕರಿಯಣ್ಣ, ಎಂ.ಶ್ರೀಕಾಂತ್, ಎಸ್.ಕೆ.ಮರಿಯಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎನ್.ರಮೇಶ್,ಕಲಗೋಡ್ ರತ್ನಾಕರ್, ನಾಗರಾಜ್ ಗೌಡ, ಪಿ.ಓ.ಶಿವಕುಮಾರ್, ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು, ಮುಂಚೂಣಿ ಘಟಕದ ಅಧ್ಯಕ್ಷರುಗಳು, ಮಹಿಳಾ ವಿಭಾಗ, ಯುವ ಘಟಕ ಹಾಗೂ ಎನ್ಎಸ್ಯುಐ ಮುಖಂಡರುಗಳು ಹಾಗೂ ನೂರಾರು ಕಾರ್ಯಕರ್ತರು ಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲಿದ್ದಾರೆ.