ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಮೆಸ್ಕಾಂ ಪ್ರಧಾನ ಮಂತ್ರಿ ಸೂರ್ಯ ಫರ್ ಸೇವಾ ಸೇತು ಯೋಜನೆಯನ್ನು ಪರಿಣಾಮ ಕಾರಿಯಾಗಿ ಅನುಷ್ಠಾನ ಗೊಳಿಸಲು ಮುಂದಾಗಿದೆ ಎಂದು ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಎಚ್.ಆರ್.ವೀರೇಂದ್ರ ಹೇಳಿದರು.
ಅವರು ಗುರುವಾರ ನಗರದ ಉಂಬ್ಳೆಬೈಲ್ ರಸ್ತೆಯ ಮೆಸ್ಕಾಂ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳ ಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಪ್ರಧಾನ ಮಂತ್ರಿ ಸೂರ್ಯಫರ್ ಸೇವಾ ಸೇತು ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಯೋಜನೆ ಯಿಂದ ಗ್ರಾಹಕರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಇದಕ್ಕೆ ಪೂರಕವಾಗಿ ವಿವಿಧ ಸೋಲಾರ್ ಕಂಪನಿಗಳ ಅಧಿಕೃತ ಮಾರಾಟ ಗಾರ ರೊಂದಿಗೆ ಕಾರ್ಯಾಗಾರ ಆಯೋಜಿಸ ಲಾಗಿದೆ. ಸೋಲಾರ್ ಅಳವಡಿಕೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ನೀಡಲಿದ್ದು, ಅಲ್ಲದೆ ಗ್ರಾಹಕ ರಿಗೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಸಹ ಕಲ್ಪಿಸಿಕೊಡಲಿ ದ್ದಾರೆ. ಸೋಲಾರ್ ಅಳವಡಿಕೆಯಿಂದ ಮೆಸ್ಕಾಂಗೆ ವಿದ್ಯುತ್ ಉಳಿತಾಯವಾಗಲಿದ್ದು, ಜೊತೆಗೆ ಗ್ರಾಹಕರಿಗೆ ಹೆಚ್ಚಿನ ಪ್ರಯೋಜನ ವಾಗಲಿದೆ. 20 ವರ್ಷಗಳವರೆಗೆ ಉಚಿತ ವಿದ್ಯುತ್ ಸೌಲಭ್ಯ ಪಡೆದು ಕೊಳ್ಳಬಹುದಾಗಿದೆ ಎಂದರು.
ನಗರ ಸಹಾಯಕ ಕಾರ್ಯನಿರ್ವಾ ಹಕ ಅಭಿಯಂತರಾದ ಬೀರಪ್ಪ, ಗ್ರಾಮಾಂತರ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರಾದ ಮುನಾಫ್ ಮತ್ತು ವಿಭಾಗ ಕಛೇರಿ ಲೆಕ್ಕಾಧಿಕಾರಿ ಅಶ್ವಿನ್ ಕುಮಾರ್ ಹಾಗು ಮೆಸ್ಕಾಂ ವಿವಿಧ ಘಟಕಗಳ ಅಧಿಕಾರಿ ಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೆಸ್ಕಾಂ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸಿಬ್ಬಂದಿ ವರ್ಗದವರು, ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಗ್ರಾಹಕರು ಪಾಲ್ಗೊಂಡಿದ್ದರು.