ಭದ್ರಾವತಿ: ಕರ್ನಾಟಕ ಸರ್ಕಾರ ಹಾಗೂ ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ *ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ'* ಅಭಿಯಾನದಡಿ ತಾಲೂಕಿನ ಹೊಳೆಹೊನ್ನೂರು 2ನೇ ಹೋಬಳಿಯ ಆನವೇರಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ ನಡೆಯಿತು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕ ಅವರ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯಗಳು ಹಾಗೂ ವಿವಿಧ ಇಲಾಖೆಗಳ ಸೇವೆಗಳನ್ನು ತಲುಪಿಸುವ ಉದ್ದೇಶದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿ ಗಳಿಗೆ ತಲುಪಿಸುವುದು, ಸಾರ್ವಜನಿ ಕರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಆಡಳಿತ ವ್ಯವಸ್ಥೆಯನ್ನು ಜನಸ್ನೇಹಿ ಯಾಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ.
ಜನರು ತಮ್ಮ ಸಮಸ್ಯೆಗಳನ್ನು ಸಂಬಂಧ ಪಟ್ಟ ಇಲಾಖೆಗಳ ಗಮನಕ್ಕೆ ಎಂಬ ಆಶಯ ದೊಂದಿಗೆ ತಂದು ಸರ್ಕಾರಿ ಪ್ರಜಾಸೇವೆ ಸೌಲಭ್ಯಗಳನ್ನು ಸದುಪಯೋಗಪಡಿಸಿ ಕೊಳ್ಳಬೇಕು ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿ ಗಳು, ಸ್ಥಳೀಯ ಜನಪ್ರತಿ ನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.