ಭದ್ರಾವತಿ-ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ: ಯುವಕನಿಗೆ ಚಾಕು ಇರಿತ, ನಾಲ್ವರು ಅಂದರ್

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕಿನ ಆನವೇರಿ ಗ್ರಾಮದಲ್ಲಿ ತಡರಾತ್ರಿ ಸುಮಾರು ಒಂದು ಗಂಟೆ ಸುಮಾರಿಗೆ ಕುರಿ ಕಾಳಗದ ವೇಳೆ ನಡೆಯುತ್ತಿದ್ದ ಜೂಜಾಟದ ಸಂದರ್ಭದಲ್ಲಿ ಗಲಾಟೆ ನಡೆದು ಯುವಕನೊಬ್ಬ ಚಾಕು ಇರಿತಕ್ಕೆ ಒಳಗಾಗಿರುವ ಘಟನೆ ನಡೆದಿದೆ.

ಸುನಿಲ್ ಎಂಬ ಯುವಕ ಹಾಗೂ ಶಿವಮೊಗ್ಗ ನಗರದ ಟಿಪ್ಪು ನಗರದ ಕೆಲ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಈ ವೇಳೆ ಸುನಿಲ್‌ಗೆ ಚಾಕು ವಿನಿಂದ ಇರಿದು ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡ ಸುನಿಲ್ ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲ ಗಳಿಂದ ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಂಕಿತ ನಾಲ್ವರು ಯುವಕ ರನ್ನು ಬಂಧಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು