ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಇ.ರಘು ನೇಮಕ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಇ.ರಘು ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಸಿಸಿ ರಾಜ್ಯಾಧ್ಯಕ್ಷ ಶಾಂತವೀರ ನಾಯ್ಕ ರವರು ನೇಮಕ ಮಾಡಿ ಅದೇಶಿಸಿದ್ದಾರೆ.

ತಮಗೆ ನೀಡಲಾಗಿರುವ ಜವಾಬ್ದಾರಿ ಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗ ದರ್ಶನಲ್ಲಿ ಸಂಬಂಧಪಟ್ಟ ಮುಖಂಡ ರುಗಳ ಸಹಕಾರ ಮತ್ತು ಸಹಯೋಗ ದೊಂದಿಗೆ ಪಕ್ಷ ಸಂಘಟನೆ ಹಾಗೂ ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯರ ಸಹಕಾರ ಪಡೆದು ಜಿಲ್ಲಾ, ಬ್ಲಾಕ್, ವಾರ್ಡ್ ಹೋಬಳಿ ಮಟ್ಟದ (ಜಿಲ್ಲಾ ಪಂಚಾಯಿತಿ ಕ್ಷೇತ್ರದ) ವ್ಯಾಪ್ತಿಯ ಕಾಂಗ್ರೆಸ್ ಸಮಿತಿಗಳ ರಚನೆ ಹಾಗೂ ಕಾರ್ಮಿಕ ವಿಭಾಗದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಿ ಕಾರ್ಮಿಕರ ಏಳಿಗೆಗಾಗಿ ಶ್ರಮಿಸುವಂತೆ ಆದೇಶ ಪ್ರತಿಯಲ್ಲಿ ಸೂಚಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು