ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ದಕ್ಷತೆಯ ಸಂಕೇತವಾಗಿದ್ದ ಐಪಿಎಸ್ ಅಧಿಕಾರಿ ದಿ:ಡಾ.ಮಧುಕರ್ ಶೆಟ್ಟಿಯವರ 7ನೇ ವರ್ಷದ ಪುಣ್ಯ ಸ್ಮರಣೆ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ನಡೆಯಿತು.
ಡಾ. ಮಧುಕರ್ ಶೆಟ್ಟಿ ಅಭಿಮಾನಿ ಬಳಗ ವತಿಯಿಂದ ಕೆಆರ್‌ಎಸ್ ಪಕ್ಷದ ಸಿ.ತೀರ್ಥೇಶ್, ಶ್ರೀ ತಿರುಮಲ ಚಾರಿಟಬಲ್ ಫೌಂಡೇಶನ್ ಪ್ರಶಾಂತ್ ಹಾಗು ಜೀವ ಸಂಜೀವಿನಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಹಯೋಗ ದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ಆರಂಭದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆಯೊಂದಿಗೆ ಮತ್ತು ಡಾ. ಮಧುಕರ್ ಶೆಟ್ಟಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಮುಖ ರಾದ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್.ಗೌಡ, ವಿವಿಧ ಸಂಘಸಂಸ್ಥೆಗಳ ಮುಖಂಡರಾದ ಮುಕುಂದ, ಚೌಡಪ್ಪ, ಸುರೇಶ್, ಅಬ್ದುಲ್ ಖದೀರ್ ಮತ್ತಿತರರು ಮಾತನಾಡಿ, ಇಂತಹ ಕಾರ್ಯಕ್ರಮ ಗಳನ್ನು ಆಯೋಜನೆ ಮಾಡುವ ಮೂಲಕ ಸಮಾಜಕ್ಕೆ ಮಾದರಿ ಯಾಗಿರುವುದು ಶ್ಲಾಘನೀಯವಾಗಿದೆ. ಸಾರ್ವಜನಿಕರು ಇಂತಹ ಕಾರ್ಯಕ್ರಮ ಗಳಿಗೆ ಹೆಚ್ಚಿನ ಸಹಕಾರ ನೀಡುವ ಅಗತ್ಯವಿದೆ ಎಂದರು.
ಶಿಬಿರದಲ್ಲಿ 28 ಮಂದಿ ರಕ್ತದಾನ ಮಾಡಿದರು. ದಾನಿಗಳಿಗೆ ಜೀವ ಸಂಜೀವಿನಿ ಸ್ವಯಂಪ್ರೇರಿತ ರಕ್ತ ಕೇಂದ್ರದವತಿಯಿಂದ ಪ್ರಮಾಣ ಪತ್ರ ನೀಡಲಾಯಿತು.
Tags
ಭದ್ರಾವತಿ ಸುದ್ದಿ